Matthew 26:52 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವನಿಗೆ, “ನಿನ್ನ ಖಡ್ಗವನ್ನು ಒರೆಗೆ ಹಾಕು. ಕತ್ತಿಯನ್ನು ಬಳಸುವ ಜನರು ಕತ್ತಿಯಿಂದಲೇ ಸಾಯುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,
Kannada BSI Bible 2016
ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಅವನಿಗೆ - ನಿನ್ನ ಕತ್ತಿಯನ್ನು ತಿರಿಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ಸಾಯುವರು.
Kannada Bible (KNCL) BSI 2016
ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ಒರೆಗೆ ಹಾಕು. ಖಡ್ಗ ಎತ್ತಿದವರೆಲ್ಲರೂ ಖಡ್ಗದಿಂದಲೇ ಹತರಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ತಿರುಗಿ ಅದರ ಒರೆಯಲ್ಲಿ ಹಾಕು. ಖಡ್ಗವನ್ನು ಹಿಡಿದವರೆಲ್ಲರೂ ಖಡ್ಗದಿಂದ ನಾಶವಾಗುವರು.