Matthew 26:57 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸುವನ್ನು ಬಂಧಿಸಿದ್ದವರು ಆತನನ್ನು ಪ್ರಧಾನ ಯಾಜಕನಾದ ಕಾಯಫನ ಮನೆಗೆ ಕರೆದೊಯ್ದರು. ಅಲ್ಲಿ ಧರ್ಮೋಪದೇಶಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಒಟ್ಟಿಗೆ ಸೇರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.
Kannada BSI Bible 2016
ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತೆಗೆದುಕೊಂಡು ಹೋದರು.
Kannada Bible (KNCL) BSI 2016
ಬಳಿಕ ಯೇಸುಸ್ವಾಮಿಯನ್ನು ಬಂಧಿಸಿದ್ದವರು ಅವರನ್ನು ಪ್ರಧಾನಯಾಜಕ ಕಾಯಫನ ಬಳಿಗೆ ಕರೆದೊಯ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವನ್ನು ಹಿಡಿದಿದ್ದವರು ಅವರನ್ನು ಮಹಾಯಾಜಕನಾದ ಕಾಯಫನ ಬಳಿಗೆ ತೆಗೆದುಕೊಂಡು ಹೋದರು. ಅಲ್ಲಿ ನಿಯಮ ಬೋಧಕರೂ ಹಿರಿಯರೂ ಕೂಡಿ ಬಂದಿದ್ದರು.