Matthew 26:58 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿಗೆ ಏನಾಗುತ್ತದೋ ಎಂಬುದನ್ನು ನೋಡಲು ಪೇತ್ರನು ಆತನನ್ನು ದೂರದಿಂದ ಹಿಂಬಾಲಿಸುತ್ತಾ ಪ್ರಧಾನಯಾಜಕನ ಭವನದ ಅಂಗಳದೊಳಗೆ ಬಂದು ಕಾವಲುಗಾರರೊಂದಿಗೆ ಕುಳಿತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.
Kannada BSI Bible 2016
ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿ ಬಂದಿದ್ದರು. ಪೇತ್ರನಾದರೋ ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದ ತನಕ ಬಂದು ಒಳಗೆ ಹೊಕ್ಕು ಆತನ ಗತಿ ಏನಾಗುವದೋ ನೋಡಬೇಕೆಂದು ಓಲೇಕಾರರ ಸಂಗಡ ಕೂತುಕೊಂಡನು.
Kannada Bible (KNCL) BSI 2016
ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೇತ್ರನು ಮಹಾಯಾಜಕನ ಅರಮನೆಗೆ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ, ಒಳಗೆ ಹೋಗಿ ಅಂತ್ಯವೇನಾಗುವುದೆಂದು ನೋಡಲು ಸೇವಕರೊಂದಿಗೆ ಕುಳಿತುಕೊಂಡನು.