Matthew 26:62 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಧಾನಯಾಜಕನು ಎದ್ದುನಿಂತು ಯೇಸುವಿಗೆ, “ಈ ಜನರು ನಿನ್ನ ಮೇಲೆ ಹೊರಿಸಿರುವ ಆಪಾದನೆಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯಾ? ಇವರು ಹೇಳುತ್ತಿರುವುದೆಲ್ಲಾ ನಿಜವೇ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮಹಾಯಾಜಕನು ಎದ್ದು ನಿಂತು, “ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?” ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು.
Kannada BSI Bible 2016
ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮಹಾಯಾಜಕನು ಎದ್ದು ನಿಂತು - ನೀನೇನೂ ಉತ್ತರ ಹೇಳುವದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು.
Kannada Bible (KNCL) BSI 2016
ಆಗ ಪ್ರಧಾನಯಾಜಕರು ಎದ್ದುನಿಂತು ಯೇಸುವನ್ನು ನೋಡಿ, “ಈ ಜನರು ನಿನಗೆ ವಿರುದ್ಧ ತಂದಿರುವ ಆರೋಪಣೆಗಳನ್ನು ಕೇಳುತ್ತಿರುವೆಯಾ? ಇವುಗಳಿಗೆ ನಿನ್ನ ಉತ್ತರ ಏನು?” ಎಂದು ಪ್ರಶ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಹಾಯಾಜಕನು ಎದ್ದು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವುದು ಏನು?” ಎಂದು ಕೇಳಿದನು.