Matthew 26:64 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.
Kannada BSI Bible 2016
ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು.
Kannada Bible (KNCL) BSI 2016
ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.