Matthew 26:65 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಧಾನಯಾಜಕನು ಇದನ್ನು ಕೇಳಿ ಬಹಳ ಕೋಪಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈ ಮನುಷ್ಯನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಯಾವ ಸಾಕ್ಷಿಗಳ ಅಗತ್ಯವೂ ಇಲ್ಲ. ಇವನು ಮಾಡಿದ ದೇವದೂಷಣೆಯನ್ನು ನೀವೇ ಕೇಳಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;
Kannada BSI Bible 2016
ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು - ಇದು ದೇವದೂಷಣೆಯ ಮಾತು; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;
Kannada Bible (KNCL) BSI 2016
ಇದನ್ನು ಕೇಳಿದ್ದೇ ಪ್ರಧಾನಯಾಜಕನು ತನ್ನ ಉಡುಪನ್ನು ಕೋಪದಿಂದ ಹರಿದುಕೊಂಡನು. “ಇವನು ದೇವದೂಷಣೆ ಆಡಿದ್ದಾನೆ. ಇನ್ನು ನಮಗೆ ಸಾಕ್ಷಿಗಳು ಏತಕ್ಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈತನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಏತಕ್ಕೆ? ನೋಡಿ, ಈಗ ಈತನ ದೇವದೂಷಣೆಯನ್ನು ನೀವೇ ಕೇಳಿದ್ದೀರಲ್ಲಾ