Matthew 26:66 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ತೀರ್ಮಾನವೇನು?” ಎಂದು ಕೇಳಿದನು. ಯೆಹೂದ್ಯರು, “ಇವನು ಅಪರಾಧಿ. ಇವನು ಸಾಯಲೇಬೇಕು” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು.
Kannada BSI Bible 2016
ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಹೇಗೆ ತೋರುತ್ತದೆ? ಅನ್ನಲು ಇವನು ಮರಣದಂಡನೆ ಹೊಂದತಕ್ಕವನು ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ಇವನಾಡಿದ ದೇವದೂಷಣೆಯನ್ನು ನೀವೇ ಕೇಳಿದ್ದೀರಿ. ಈಗ ನಿಮ್ಮ ತೀರ್ಮಾನ ಏನು?” ಎಂದು ಕೇಳಿದನು. ಅವರು, “ಇವನಿಗೆ ಮರಣದಂಡನೆ ಆಗಬೇಕು,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಿದ್ದಕ್ಕೆ ಅವರು ಉತ್ತರವಾಗಿ, “ಈತನು ಮರಣಕ್ಕೆ ಪಾತ್ರನು,” ಎಂದರು.