Matthew 26:69 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇತ್ತ ಪೇತ್ರನು ಅಂಗಳದಲ್ಲಿ ಕುಳಿತಿದ್ದನು. ಸೇವಕಿಯೊಬ್ಬಳು ಪೇತ್ರನ ಬಳಿಗೆ ಬಂದು, “ನೀನು ಸಹ ಗಲಿಲಾಯದ ಯೇಸುವಿನೊಂದಿಗಿದ್ದವನು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.
Kannada BSI Bible 2016
ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇತ್ತಲಾಗಿ ಪೇತ್ರನು ಹೊರಗೆ ಅಂಗಳದಲ್ಲಿ ಕೂತಿದ್ದನು. ಅಲ್ಲಿ ಒಬ್ಬ ದಾಸಿಯು ಅವನ ಬಳಿಗೆ ಬಂದು - ನೀನು ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು ಅನ್ನಲು ಅವನು -
Kannada Bible (KNCL) BSI 2016
ಇತ್ತ ಪೇತ್ರನು ಹೊರಾಂಗಣದಲ್ಲಿ ಕುಳಿತು ಇದ್ದನು. ದಾಸಿಯೊಬ್ಬಳು ಆತನ ಬಳಿಗೆ ಬಂದು, “ನೀನು ಸಹ ಗಲಿಲೇಯದ ಯೇಸುವಿನೊಂದಿಗೆ ಇದ್ದವನು,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪೇತ್ರನು ಹೊರಾಂಗಣದಲ್ಲಿ ಕುಳಿತಿರಲು, ಒಬ್ಬ ದಾಸಿಯು ಅವನ ಬಳಿಗೆ ಬಂದು, “ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು,” ಎಂದಳು.