Matthew 26:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಸ್ತ್ರೀಯೊಬ್ಬಳು ಬಹು ಬೆಲೆಬಾಳುವ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು ಊಟಕ್ಕೆ ಕುಳಿತ್ತಿದ್ದ ಯೇಸುವಿನ ತಲೆಯ ಮೇಲೆ ಆ ಸುಗಂಧ ತೈಲವನ್ನು ಸುರಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು.
Kannada BSI Bible 2016
ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆತನು ಊಟಕ್ಕೆ ಕೂತಿರುವಾಗ ಆ ತೈಲವನ್ನು ಆತನ ತಲೆಯ ಮೇಲೆ ಹೊಯಿದಳು.
Kannada Bible (KNCL) BSI 2016
ಆಗ ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಸುಗಂಧತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು. ಊಟಕ್ಕೆ ಕುಳಿತಿದ್ದ ಯೇಸುವಿನ ತಲೆಯ ಮೇಲೆ ಆ ತೈಲವನ್ನು ಸುರಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯೊಂದಿಗೆ ಯೇಸುವಿನ ಬಳಿಗೆ ಬಂದು, ಅದನ್ನು ಅವರ ತಲೆಯ ಮೇಲೆ ಸುರಿದಳು.