Matthew 26:70 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪೇತ್ರನು, ಅಲ್ಲಿದ್ದ ಜನರೆಲ್ಲರ ಎದುರಿನಲ್ಲಿ ಆಕೆಗೆ, “ನೀನು ಏನು ಹೇಳುತ್ತಿರುವೆಯೋ ನನಗೆ ಗೊತ್ತೇ ಇಲ್ಲ” ಎಂದು ನಿರಾಕರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ” ಎಂದು ಎಲ್ಲರ ಮುಂದೆ ಹೇಳಿದನು.
Kannada BSI Bible 2016
ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲ, ನೀನು ಏನನ್ನುತ್ತೀಯೋ ನನಗೆ ಗೊತ್ತಿಲ್ಲ ಎಂದು ಎಲ್ಲರ ಮುಂದೆ ಹೇಳಿದನು.
Kannada Bible (KNCL) BSI 2016
“ನೀನು ಹೇಳುವುದು ಏನೆಂದು ನನಗೆ ತಿಳಿಯದು,” ಎಂದು ಪೇತ್ರನು ಎಲ್ಲರ ಮುಂದೆ ನಿರಾಕರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ಎಲ್ಲರ ಮುಂದೆ, “ನೀನು ಏನು ಹೇಳುತ್ತೀಯೋ ನನಗೆ ತಿಳಿಯದು,” ಎಂದು ನಿರಾಕರಿಸಿದನು.