Matthew 26:71 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಪೇತ್ರನು ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿಗೆ ಬಂದಾಗ ಮತ್ತೊಬ್ಬ ಸೇವಕಿಯು ಅವನನ್ನು ನೋಡಿ ಅಲ್ಲಿದ್ದ ಜನರಿಗೆ, “ಈ ಮನುಷ್ಯನು ನಜರೇತಿನ ಯೇಸುವಿನೊಂದಿಗಿದ್ದನು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.
Kannada BSI Bible 2016
ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೊರಟುಹೋದಾಗ ಮತ್ತೊಬ್ಬಳು ಅವನನ್ನು ಕಂಡು ಅಲ್ಲಿರುವವರಿಗೆ - ಇವನೂ ನಜರೇತಿನ ಯೇಸುವಿನ ಕೂಡ ಇದ್ದವನು ಎಂದು ಹೇಳಿದಳು.
Kannada Bible (KNCL) BSI 2016
ಆತ ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿ ಬಂದಾಗ ಇನ್ನೊಬ್ಬ ದಾಸಿ ಆತನನ್ನು ಕಂಡು, “ಈತ ನಜರೇತಿನ ಯೇಸುವಿನೊಂದಿಗೆ ಇದ್ದವನೇ,” ಎಂದು ಅಲ್ಲಿದ್ದವರಿಗೆ ತಿಳಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಮುಖ್ಯ ದ್ವಾರದೊಳಗೆ ಹೋದಾಗ, ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ, “ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು.