Matthew 26:72 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಪೇತ್ರನು, “ನಾನು ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ. ನನಗೆ ಯೇಸುವೆಂಬ ಮನುಷ್ಯನು ತಿಳಿದೇ ಇಲ್ಲ!” ಎಂದು ನಿರಾಕರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು.
Kannada BSI Bible 2016
ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತಿರಿಗಿ - ಅಲ್ಲ, ಆ ಮನುಷ್ಯನನ್ನು ನಾನರಿಯೆನು ಎಂದು ಆಣೆಯಿಟ್ಟುಕೊಂಡು ಹೇಳಿದನು.
Kannada Bible (KNCL) BSI 2016
ಪೇತ್ರನು, “ಆ ಮನುಷ್ಯ ಯಾರೋ ನಾನರಿಯೆ,” ಎಂದು ಆಣೆಯಿಟ್ಟು ಇನೊಮ್ಮೆ ನಿರಾಕರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಆಣೆ ಮಾಡಿ, “ನಾನು ಆ ಮನುಷ್ಯನನ್ನು ಅರಿಯೆನು,” ಎಂದು ತಿರುಗಿ ನಿರಾಕರಿಸಿದನು.