Matthew 26:73 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ವಲ್ಪ ಸಮಯದ ತರುವಾಯ, ಅಲ್ಲಿ ನಿಂತಿದ್ದ ಕೆಲವು ಜನರು ಪೇತ್ರನ ಸಮೀಪಕ್ಕೆ ಹೋಗಿ, “ಯೇಸುವನ್ನು ಹಿಂಬಾಲಿಸಿಕೊಂಡು ಬಂದ ಜನರಲ್ಲಿ ನೀನೂ ಒಬ್ಬನಾಗಿರುವೆ ಎಂಬುದನ್ನು ನೀನು ಮಾತಾಡುವ ರೀತಿಯೇ ತೋರಿಸುತ್ತದೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು
Kannada BSI Bible 2016
ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಲ್ಪ ಹೊತ್ತಿನ ಮೇಲೆ ಅಲ್ಲಿ ನಿಂತವರು ಮುಂದೆ ಬಂದು ಪೇತ್ರನಿಗೆ - ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು [ಗಲಿಲಾಯದವನೆಂದು] ತೋರಿಸಿಕೊಡುತ್ತದೆ ಎಂದು ಹೇಳಲಾಗಿ ಅವನು -
Kannada Bible (KNCL) BSI 2016
ಸ್ವಲ್ಪಹೊತ್ತಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನ ಹತ್ತಿರಕ್ಕೆ ಬಂದು, “ಖಂಡಿತವಾಗಿ ನೀನೂ ಅವರಲ್ಲಿ ಒಬ್ಬನು. ನೀನು ಮಾತನಾಡುವ ರೀತಿಯೇ ನಿನ್ನನ್ನು ತೋರಿಸಿಕೊಡುತ್ತದೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು. ನಿಜವಾಗಿಯೂ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ,” ಎಂದರು.