Matthew 26:75 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
Kannada BSI Bible 2016
ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಕೋಳಿ ಕೂಗಿತು. ಆಗ ಪೇತ್ರನು - ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ಹೇಳಿದ ಮಾತನ್ನು ನೆನಸಿ ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
Kannada Bible (KNCL) BSI 2016
ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪೇತ್ರನು, “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.