Matthew 27:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
Kannada BSI Bible 2016
ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಿದನು. ಯೇಸು - ನೀನೇ ಹೇಳಿದ್ದೀ ಅಂದನು.
Kannada Bible (KNCL) BSI 2016
ಯೇಸುಸ್ವಾಮಿಯನ್ನು ರಾಜ್ಯಪಾಲನ ಮುಂದೆ ನಿಲ್ಲಿಸಿದರು. “ನೀನು ಯೆಹೂದ್ಯರ ಅರಸನೋ?” ಎಂದು ರಾಜ್ಯಪಾಲ ಪ್ರಶ್ನಿಸಿದನು. ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಮರುನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ರಾಜ್ಯಪಾಲನ ಮುಂದೆ ನಿಂತಿದ್ದರು. ಆಗ ಅವನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ, “ನೀನೇ ಹೇಳುತ್ತಿದ್ದಿ,” ಎಂದರು.