Matthew 27:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಪಿಲಾತನು ಯೇಸುವನ್ನು, “ಈ ಜನರು ನಿನ್ನ ಮೇಲೆ ಹೇಳುತ್ತಿರುವ ಈ ದೂರುಗಳನ್ನೆಲ್ಲ ನೀನು ಕೇಳುತ್ತಿದ್ದರೂ ಏಕೆ ಉತ್ತರ ಕೊಡುತ್ತಿಲ್ಲ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು.
Kannada BSI Bible 2016
ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪಿಲಾತನು ಆತನನ್ನು - ಇವರು ನಿನ್ನ ಮೇಲೆ ಎಷ್ಟು ಸಾಕ್ಷಿ ಹೇಳುತ್ತಾರೆ, ನೀನು ಕೇಳುವದಿಲ್ಲವೋ? ಎಂದು ಕೇಳಿದನು.
Kannada Bible (KNCL) BSI 2016
ಆಗ ಪಿಲಾತನು, “ಇವರು ನಿನಗೆ ವಿರುದ್ಧ ಇಷ್ಟೆಲ್ಲಾ ಹೇಳುತ್ತಿರುವುದು ನಿನಗೆ ಕೇಳಿಸುತ್ತಿಲ್ಲವೆ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಿಲಾತನು ಯೇಸುವಿಗೆ, “ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುತ್ತಿರುವುದು ನಿನಗೆ ಕೇಳಿಸುವುದಿಲ್ಲವೋ?” ಎಂದನು.