Matthew 27:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರೆಲ್ಲರೂ ಪಿಲಾತನ ಭವನದ ಬಳಿ ನೆರೆದಿದ್ದರು. ಪಿಲಾತನು ಅವರಿಗೆ, “ನಾನು ನಿಮಗಾಗಿ ಯಾವ ಕೈದಿಯನ್ನು ಬಿಡುಗಡೆ ಮಾಡಲಿ, ಬರಬ್ಬನನ್ನೋ ಅಥವಾ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.
Kannada BSI Bible 2016
ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಅವರು ಕೂಡಿಬಂದ ಸಮಯದಲ್ಲಿ ಪಿಲಾತನು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ತಿಳಿದು - ನಿಮಗೆ ಯಾರನ್ನು ಬಿಟ್ಟುಕೊಡಬೇಕನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನೋ ಎಂದು ಅವರನ್ನು ಕೇಳಿದನು.
Kannada Bible (KNCL) BSI 2016
ಹೀಗಿರಲಾಗಿ, ಪಿಲಾತನು ಅಲ್ಲಿ ಕೂಡಿದ್ದ ಜನರನ್ನು ಉದ್ದೇಶಿಸಿ, “ನಾನು ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನೋ?’ ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಸಮೂಹ ಕೂಡಿಬಂದಿದ್ದಾಗ ಪಿಲಾತನು ಅವರಿಗೆ, “ನಿಮಗೆ ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು.