Matthew 27:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
Kannada BSI Bible 2016
ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.
Kannada Bible (KNCL) BSI 2016
ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.