Matthew 27:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಬರಬ್ಬನನ್ನು ಬಿಡುಗಡೆ ಮಾಡಬೇಕೆಂದೂ ಯೇಸುವನ್ನು ಕೊಲ್ಲಿಸಬೇಕೆಂದೂ ಕೇಳಿಕೊಳ್ಳಲು ಜನರಿಗೆ ಹೇಳಿಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.
Kannada BSI Bible 2016
ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅತ್ತಲಾಗಿ ಮಹಾಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟು ಕೊಡಬೇಕೆಂದು ಬೇಡಿಕೊಳ್ಳುವ ಹಾಗೂ ಯೇಸುವನ್ನು ನಾಶಗೊಳಿಸುವ ಹಾಗೂ ಜನರನ್ನು ಒಡಂಬಡಿಸಿದರು.
Kannada Bible (KNCL) BSI 2016
ಇತ್ತ, ಬರಬ್ಬನನ್ನು ಬಿಡುಗಡೆಮಾಡಿ ಯೇಸುವನ್ನು ಕೊಲ್ಲಬೇಕೆಂದು ಕೇಳಿಕೊಳ್ಳುವಂತೆ ಮುಖ್ಯಯಾಜಕರು ಮತ್ತು ಪ್ರಮುಖರು ಜನರನ್ನು ಪ್ರಚೋದಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮುಖ್ಯಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸುವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹವನ್ನು ಒಡಂಬಡಿಸಿದರು.