Matthew 27:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಿಲಾತನು, “ನಿಮಗಾಗಿ ನಾನು ಯಾರನ್ನು ಬಿಡುಗಡೆ ಮಾಡಲಿ? ಬರಬ್ಬನನ್ನೋ? ಯೇಸುವನ್ನೋ?” ಎಂದು ಕೇಳಿದನು. ಜನರು “ಬರಬ್ಬನನ್ನು!” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು.
Kannada BSI Bible 2016
ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ದೇಶಾಧಿಪತಿಯು ಅವರನ್ನು - ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ ಎಂದು ಕೇಳಲು - ಬರಬ್ಬನನ್ನು ಅಂದರು.
Kannada Bible (KNCL) BSI 2016
ರಾಜ್ಯಪಾಲನು ಪುನಃ ಜನರ ಗುಂಪನ್ನು ನೋಡಿ, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಲಿ?” ಎಂದು ಕೇಳಿದನು. ಅದಕ್ಕೆ ಅವರು “ಬರಬ್ಬನನ್ನೇ” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜ್ಯಪಾಲನು ಅವರಿಗೆ, “ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕೆನ್ನುತ್ತೀರಿ?” ಎಂದು ಕೇಳಲು ಅವರು, “ಬರಬ್ಬನನ್ನು,” ಎಂದರು.