Matthew 27:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.
Kannada BSI Bible 2016
ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಿಲಾತನು ಅವರನ್ನು - ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಎಂದು ಕೇಳಲು ಎಲ್ಲರೂ - ಅವನನ್ನು ಶಿಲುಬೆಗೆ ಹಾಕಿಸು ಅಂದರು.
Kannada Bible (KNCL) BSI 2016
“ಹಾಗಾದರೆ, ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನು ಏನುಮಾಡಲಿ?” ಎಂದು ಪಿಲಾತನು ಮರುಪ್ರಶ್ನೆ ಹಾಕಿದನು. ಅವರೆಲ್ಲರು, “ಅವನನ್ನು ಶಿಲುಬೆಗೇರಿಸಿ,” ಎಂದು ಉತ್ತರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಿಲಾತನು ಅವರಿಗೆ, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಅವರೆಲ್ಲರೂ, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಹೇಳಿದರು.