Matthew 27:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಿಲಾತನು, “ಅವನನ್ನು ಶಿಲುಬೆಗೇರಿಸೆಂದು ನೀವು ಕೇಳುವುದೇಕೆ? ಅವನೇನು ತಪ್ಪುಮಾಡಿದ್ದಾನೆ?” ಎಂದು ಕೇಳಿದನು. ಆದರೆ ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಕೂಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.
Kannada BSI Bible 2016
ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕವನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು.
Kannada Bible (KNCL) BSI 2016
“ಏಕೆ? ಇವನೇನು ಕೇಡುಮಾಡಿದ್ದಾನೆ?” ಎಂದು ಪಿಲಾತನು ಕೇಳಲು, “ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಅವರು ಇನ್ನೂ ಹೆಚ್ಚಾಗಿ ಆರ್ಭಟಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.