Matthew 27:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು
Kannada BSI Bible 2016
ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪಿಲಾತನು ತನ್ನ ಯತ್ನ ನಡೆಯುವದಿಲ್ಲ, ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರು ತಕ್ಕೊಂಡು ಜನರ ಮುಂದೆ ಕೈ ತೊಳಕೊಂಡು - ಈ ಪುರುಷನನ್ನು ಕೊಲ್ಲಿಸಿದ್ದಕ್ಕೆ ನಾನು ಸೇರಿದವನಲ್ಲ, ನೀವೇ ನೋಡಿಕೊಳ್ಳಿರಿ ಅನ್ನಲಾಗಿ ಜನರೆಲ್ಲಾ -
Kannada Bible (KNCL) BSI 2016
ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು.