Matthew 27:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮುಳ್ಳಿನ ಬಳ್ಳಿಯಿಂದ ಒಂದು ಕಿರೀಟವನ್ನು ಹೆಣೆದು ಆತನ ತಲೆಯ ಮೇಲಿಟ್ಟರು. ಆತನ ಬಲಗೈಗೆ ಒಂದು ಕೋಲನ್ನು ಕೊಟ್ಟರು. ಬಳಿಕ ಸೈನಿಕರು ಯೇಸುವಿನ ಮುಂದೆ ಬಾಗಿ, “ಯೆಹೂದ್ಯರ ರಾಜನೇ, ನಮಸ್ಕಾರ” ಎಂದು ಅಪಹಾಸ್ಯ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ
Kannada BSI Bible 2016
ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ - ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನನ್ನು ಪರಿಹಾಸ್ಯಮಾಡಿದರು.
Kannada Bible (KNCL) BSI 2016
ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು. ಕೈಗೆ ಒಂದು ಕೋಲನ್ನು ಕೊಟ್ಟರು. ಆಮೇಲೆ ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನಿಗೆ ಜಯವಾಗಲಿ!” ಎಂದು ಹೇಳಿ ಪರಿಹಾಸ್ಯಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು, ಯೇಸುವಿನ ತಲೆಯ ಮೇಲಿಟ್ಟು, ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವನ್ನು ಹಾಸ್ಯಮಾಡಿದರು.