Matthew 27:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವನ್ನು ಆತನ ವೈರಿಗಳಿಗೆ ಒಪ್ಪಿಸಿಕೊಟ್ಟ ಯೂದನು, ಯೇಸುವಿಗೆ ಸಂಭವಿಸಿದ್ದನ್ನು ಕಂಡು, ತಾನು ಮಾಡಿದ ದ್ರೋಹಕ್ಕಾಗಿ ಬಹಳ ಪಶ್ಚಾತ್ತಾಪಪಟ್ಟನು. ಅವನು ಬೆಳ್ಳಿಯ ನಾಣ್ಯಗಳನ್ನು ಮಹಾಯಾಜಕರ ಮತ್ತು ಹಿರಿಯನಾಯಕರ ಬಳಿಗೆ ತೆಗೆದುಕೊಂಡು ಹೋಗಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.
Kannada BSI Bible 2016
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾಯಿತೆಂದು ನೋಡಿ ಪಶ್ಚಾತ್ತಾಪಪಟ್ಟು ಆ ಮೂವತ್ತು ರೂಪಾಯಿಗಳನ್ನು ಮಹಾಯಾಜಕರಿಗೂ ಹಿರಿಯರಿಗೂ ತಿರಿಗಿ ತಂದು -
Kannada Bible (KNCL) BSI 2016
ಯೇಸುಸ್ವಾಮಿ ದಂಡನೆಗೆ ಗುರಿಯಾದರೆಂಬುದನ್ನು ಕಂಡು, ಗುರುದ್ರೋಹಿ ಯೂದನು ಪರಿತಾಪಗೊಂಡನು. ಆ ಮೂವತ್ತು ಬೆಳ್ಳಿನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಮರಳಿ ತಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿಗೆ ದ್ರೋಹಮಾಡಿದ ಯೂದನು ಗುರುವಿಗೆ ಮರಣ ದಂಡನೆಯ ತೀರ್ಪಾದದ್ದನ್ನು ಕಂಡು ವಿಷಾದಿಸಿ, ಆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಮರಳಿ ತಂದನು.