Matthew 27:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಅಪಹಾಸ್ಯ ಮಾಡಿದ ಬಳಿಕ, ಆತನ ನಿಲುವಂಗಿಯನ್ನು ತೆಗೆದುಹಾಕಿ ಆತನ ಬಟ್ಟೆಗಳನ್ನು ಮತ್ತೆ ಆತನಿಗೆ ತೊಡಿಸಿ ಶಿಲುಬೆಗೇರಿಸಲು ಕರೆದೊಯ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
Kannada BSI Bible 2016
ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ಒಲ್ಲಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕೆ ತೆಗೆದುಕೊಂಡುಹೋದರು.
Kannada Bible (KNCL) BSI 2016
ಹೀಗೆ ಪರಿಹಾಸ್ಯಮಾಡಿ ಆದಮೇಲೆ, ಹೊದಿಸಿದ್ದ ಮೇಲಂಗಿಯನ್ನು ತೆಗೆದುಹಾಕಿ, ಅವರ ಉಡುಪನ್ನೇ ಪುನಃ ತೊಡಿಸಿದರು. ಬಳಿಕ ಅವರನ್ನು ಶಿಲುಬೆಗೇರಿಸಲು ಕರೆದೊಯ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಹಾಸ್ಯ ಮಾಡಿದ ಮೇಲೆ, ಆ ನಿಲುವಂಗಿಯನ್ನು ಯೇಸುವಿನಿಂದ ತೆಗೆದುಹಾಕಿ ಅವರ ವಸ್ತ್ರವನ್ನು ಹೊದಿಸಿ, ಯೇಸುವನ್ನು ಶಿಲುಬೆಗೆ ಹಾಕುವುದಕ್ಕಾಗಿ ನಡೆಸಿಕೊಂಡು ಹೋದರು.