Matthew 27:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈನಿಕರು ಯೇಸುವಿನೊಂದಿಗೆ ನಗರದಿಂದ ಹೊರಕ್ಕೆ ಹೋಗುತ್ತಿರುವಾಗ ಸಿರೇನ ಪಟ್ಟಣದ “ಸಿಮೋನ” ಎಂಬ ವ್ಯಕ್ತಿಯನ್ನು ಕಂಡರು. ಆತನ ಶಿಲುಬೆ ಹೊರುವುದಕ್ಕಾಗಿ ಅವರು ಅವನನ್ನು ಬಲವಂತಪಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.
Kannada BSI Bible 2016
ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬವನನ್ನು ಕಂಡು ಅವನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು.
Kannada Bible (KNCL) BSI 2016
ಸೈನಿಕರು ಯೇಸುಸ್ವಾಮಿಯನ್ನು ಕರೆದುಕೊಂಡು ಊರಹೊರಗೆ ಹೋಗುತ್ತಿದ್ದಾಗ ಸಿರೇನ್ ಪಟ್ಟಣದ ಸಿಮೋನ್ ಎಂಬಾತನನ್ನು ಕಂಡರು. ಯೇಸುವಿನ ಶಿಲುಬೆಯನ್ನು ಹೊತ್ತುಬರುವಂತೆ ಅವನನ್ನು ಬಲವಂತಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹೊರಗೆ ಹೋಗುತ್ತಿರುವಾಗ, ಕುರೇನೆ ಗ್ರಾಮದ ಸೀಮೋನನೆಂಬ ಮನುಷ್ಯನನ್ನು ಕಂಡು, ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.