Matthew 27:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.
Kannada BSI Bible 2016
ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
Kannada Bible (KNCL) BSI 2016
ಅಲ್ಲಿ ಕಹಿಬೆರೆಸಿದ ದ್ರಾಕ್ಷಾರಸವನ್ನು ಯೇಸುವಿಗೆ ಕುಡಿಯಲು ಕೊಟ್ಟರು. ಅವರು ಅದನ್ನು ರುಚಿನೋಡಿ ಕುಡಿಯಲು ಇಚ್ಛಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಯೇಸುವಿಗೆ ಕಹಿ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಯೇಸು ಅದನ್ನು ರುಚಿ ನೋಡಿ ಕುಡಿಯಲು ಇಷ್ಟಪಡಲಿಲ್ಲ.