Matthew 27:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು. \sc “ಈತನು ಯೇಸು, ಯೆಹೂದ್ಯರ ರಾಜ”\sc* ಎಂಬುದೇ ಆ ಅಪರಾಧ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.
Kannada BSI Bible 2016
ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನಂದರೆ - ಇವನು ಯೇಸು, ಯೆಹೂದ್ಯರ ಅರಸನು ಎಂಬದೇ.
Kannada Bible (KNCL) BSI 2016
“ಈತ ಯೇಸು, ಯೆಹೂದ್ಯರ ಅರಸ” ಎಂದು ಬರೆದಿದ್ದ ದೋಷಾರೋಪಣೆಯ ಫಲಕವನ್ನು ಅವರ ಶಿರಸ್ಸಿನ ಮೇಲ್ಭಾಗದಲ್ಲಿ ಇಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ತಲೆಯ ಮೇಲ್ಭಾಗದಲ್ಲಿ ಅವರ ವಿರುದ್ಧ ದೋಷಾರೋಪಣೆಯನ್ನು ಬರೆದಿಟ್ಟರು. ಅದೇನೆಂದರೆ: ಈತನು ಯೆಹೂದ್ಯರ ಅರಸನಾದ ಯೇಸು.