Matthew 27:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನೇ ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.
Kannada BSI Bible 2016
ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೋ; ದೇವರಮಗನು ಆಗಿದ್ದರೆ ಶಿಲುಬೆಯಿಂದ ಇಳಿದು ಬಾ ಎಂದು ಆತನನ್ನು ಹಂಗಿಸುತ್ತಿದ್ದರು.
Kannada Bible (KNCL) BSI 2016
“ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ, ಈಗ ನಿನ್ನನ್ನು ನೀನೇ ರಕ್ಷಿಸಿಕೋ; ನೀನು ದೇವರ ಪುತ್ರನಾದರೆ ಶಿಲುಬೆಯಿಂದ ಇಳಿದು ಬಾ,” ಎಂದು ಮೂದಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು.