Matthew 27:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇವನು ಬೇರೆಯವರನ್ನು ರಕ್ಷಿಸಿದನು. ಆದರೆ ತನ್ನನ್ನು ರಕ್ಷಿಸಿಕೊಳ್ಳಲಾರ! ಇಸ್ರೇಲರ ರಾಜ ಎಂದು ಜನ ಹೇಳುತ್ತಾರೆ. ಇವನು ರಾಜನಾಗಿದ್ದರೆ ಶಿಲುಬೆಯಿಂದ ಕೆಳಗಿಳಿದು ಬರಲಿ. ಆಗ ನಾವು ಇವನನ್ನು ನಂಬುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.
Kannada BSI Bible 2016
ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ರಕ್ಷಿಸಿಕೊಳ್ಳಲಾರನು. ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಟ್ಟೇವು.
Kannada Bible (KNCL) BSI 2016
“ಇವನು ಇತರರನ್ನು ರಕ್ಷಿಸಿದ; ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು; ಇಸ್ರಯೇಲಿನ ಅರಸನಂತೆ! ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ಇವನನ್ನು ನಂಬುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈತನು ಬೇರೆಯವರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು! ಈತನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗೆ ಇಳಿದು ಬರಲಿ. ಆಗ ನಾವು ಈತನನ್ನು ನಂಬುವೆವು.