Matthew 27:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, \tl “ಏಲೀ, ಏಲೀ, ಲಮಾ ಸಬಕ್ತಾನಿ?”\tl* ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?” ಎಂದರ್ಥ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.
Kannada BSI Bible 2016
ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಮಾರು ಮೂರು ಗಂಟೆಗೆ ಯೇಸು - ಏಲೀ, ಏಲೀ, ಲಮಾ ಸಬಕ್ತಾನೀ, ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು.
Kannada Bible (KNCL) BSI 2016
ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಮಾರು ಮೂರು ಗಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ?” ಅಂದರೆ, “ನನ್ನ ದೇವರೇ, ನನ್ನ ದೇವರೇ ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿ ಹೇಳಿದರು.