Matthew 27:58 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಕೇಳಿದನು. ಯೇಸುವಿನ ದೇಹವನ್ನು ಯೋಸೇಫನಿಗೆ ಕೊಡುವಂತೆ ಪಿಲಾತನು ಸೈನಿಕರಿಗೆ ಅಪ್ಪಣೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು.
Kannada BSI Bible 2016
ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲಾಗಿ ಪಿಲಾತನು ಅದನ್ನು ಕೊಡಬೇಕೆಂದು ಅಪ್ಪಣೆಮಾಡಿದನು.
Kannada Bible (KNCL) BSI 2016
ಈತ ಪಿಲಾತನ ಬಳಿಗೆ ಹೋಗಿ ಯೇಸುವಿನ ಪಾರ್ಥಿವ ಶರೀರವನ್ನು ತನಗೆ ಕೊಡಿಸಬೇಕೆಂದು ಬೇಡಿದನು. ಪಿಲಾತನು ಅದನ್ನು ಅವನಿಗೆ ಕೊಡುವಂತೆ ಅಪ್ಪಣೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ಕೇಳಿಕೊಂಡನು. ಆಗ ಪಿಲಾತನು ದೇಹವನ್ನು ಅವನಿಗೆ ಒಪ್ಪಿಸುವಂತೆ ಅಪ್ಪಣೆಕೊಟ್ಟನು.