Matthew 27:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಹಾಯಾಜಕರು ದೇವಾಲಯದಲ್ಲಿದ್ದ ಬೆಳ್ಳಿಯ ನಾಣ್ಯಗಳನ್ನು ಆಯ್ದುಕೊಂಡು, “ಈ ಹಣವನ್ನು ಒಬ್ಬ ಮನುಷ್ಯನ ಹತ್ಯೆಗಾಗಿ ಕೊಟ್ಟಿದ್ದ ಕಾರಣ ಇದನ್ನು ದೇವಾಲಯದ ಹಣದೊಂದಿಗೆ ಸೇರಿಸುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.
Kannada BSI Bible 2016
ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕರು ಆ ಹಣವನ್ನು ತೆಗೆದುಕೊಂಡು ಅದು ಜೀವಹತ್ಯಕ್ಕೆ ಕೊಟ್ಟ ಕ್ರಯವಾದ್ದರಿಂದ ಅದನ್ನು ಕಾಣಿಕೇಪೆಟ್ಟಿಗೆಯಲ್ಲಿ ಹಾಕಬಾರದು ಎಂದರು.
Kannada Bible (KNCL) BSI 2016
ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು, “ಇದು ರಕ್ತದ ಕ್ರಯ. ಇದನ್ನು ಕಾಣಿಕೆ ಕೋಶದಲ್ಲಿ ಹಾಕುವುದು ಸರಿಯಲ್ಲ,” ಎಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು.