Matthew 27:63 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;
Kannada BSI Bible 2016
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;
Kannada Bible (KNCL) BSI 2016
“ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.