Matthew 27:64 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮೂರು ದಿನಗಳವರೆಗೆ ಆ ಸಮಾಧಿಯನ್ನು ಭದ್ರವಾಗಿ ಕಾಯಲು ಆಜ್ಞಾಪಿಸಿರಿ. ಅವನ ಶಿಷ್ಯರು ಬಂದು, ಅವನ ದೇಹವನ್ನು ಕದ್ದುಕೊಂಡು ಹೋಗಿ, ಅವನು ಸಮಾಧಿಯಿಂದ ಮೇಲೆದ್ದಿದ್ದಾನೆ ಎಂದು ಜನರಿಗೆ ಹೇಳಬಹುದು. ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡು ಮೋಸವಾದೀತು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.
Kannada BSI Bible 2016
ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ ಎಂದು ಹೇಳಾರು; ಆಗ ಮೊದಲನೆಯ ಮೋಸಕ್ಕಿಂತ ಕಡೆಯ ಮೋಸವು ಕೆಡುಕಾದೀತು ಅಂದರು.
Kannada Bible (KNCL) BSI 2016
ಆದ್ದರಿಂದ ಮೂರನೆಯ ದಿನದ ತನಕ ಅವನ ಸಮಾಧಿಗೆ ಭದ್ರವಾದ ಕಾವಲಿರಿಸಲು ಅಪ್ಪಣೆಯಾಗಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಅವನನ್ನು ಕದ್ದುಕೊಂಡುಹೋಗಿ, ಸತ್ತವನು ಬದುಕಿಬಂದಿದ್ದಾನೆ ಎಂದು ಜನರಿಗೆ ಹೇಳಬಹುದು; ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡುಮೋಸವಾದೀತು,” ಎಂದು ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ಆತನನ್ನು ಕದ್ದುಕೊಂಡು ಹೋಗಿ, ಯೇಸು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿಯಾರು. ಆಗ ಮೊದಲನೆಯ ಮೋಸಕ್ಕಿಂತ ಕಡೆಯ ಮೋಸವು ಕೆಡುಕಾದೀತು. ಆದಕಾರಣ ಮೂರನೆಯ ದಿನದವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆಕೊಡಬೇಕು,” ಎಂದರು.