Matthew 28:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ತ್ರೀಯರು ಶಿಷ್ಯರಿಗೆ ತಿಳಿಸಲು ಹೋದರು. ಇತ್ತ ಸಮಾಧಿಯನ್ನು ಕಾಯುತ್ತಿದ್ದ ಕೆಲವು ಸೈನಿಕರು ನಗರದೊಳಕ್ಕೆ ಹೋಗಿ ನಡೆದ ಸಂಗತಿಯನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.
Kannada BSI Bible 2016
ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೋಗುತ್ತಿರುವಾಗ ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು.
Kannada Bible (KNCL) BSI 2016
ಇತ್ತ ಆ ಮಹಿಳೆಯರು ಹೋಗುತ್ತಿದ್ದಂತೆ, ಅತ್ತ ಕಾವಲುಗಾರರಲ್ಲಿ ಕೆಲವರು ನಗರಕ್ಕೆ ಬಂದು ನಡೆದ ಸಂಗತಿಯನ್ನೆಲ್ಲಾ ಮುಖ್ಯಯಾಜಕರಿಗೆ ವರದಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹೋಗುತ್ತಿರುವಾಗ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಮುಖ್ಯಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.