Matthew 28:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇಗನೆ ಹೋಗಿ ಆತನ ಶಿಷ್ಯರಿಗೆ, ‘ಯೇಸು ಪುನರುತ್ಥಾನ ಹೊಂದಿದ್ದಾನೆ. ಆತನು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ನಿಮಗಿಂತ ಮುಂಚೆಯೇ ಆತನು ಅಲ್ಲಿರುತ್ತಾನೆ. ನೀವು ಆತನನ್ನು ಅಲ್ಲಿ ನೋಡುತ್ತೀರಿ’ ಎಂದು ಹೇಳಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.
Kannada BSI Bible 2016
ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ; ನಾನು ನಿಮಗೆ ಹೇಳಿದ್ದೇನೆ, ನೋಡಿರಿ ಎಂದು ಹೇಳಿದನು.
Kannada Bible (KNCL) BSI 2016
ಈಗ ಬೇಗನೆ ಹೋಗಿ, ಅವರ ಶಿಷ್ಯರಿಗೆ, ‘ಸತ್ತಿದ್ದವರು ಪುನರುತ್ಥಾನ ಹೊಂದಿದ್ದಾರೆ; ಅವರು ನಿಮಗಿಂತ ಮುಂಚಿತವಾಗಿ ಗಲಿಲೇಯಕ್ಕೆ ಹೋಗುವರು; ಅಲ್ಲೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇಗನೆ ಹೋಗಿ ಅವರ ಶಿಷ್ಯರಿಗೆ, ‘ಅವರು ಮರಣದಿಂದ ಎದ್ದಿದ್ದಾರೆ. ಅವರು ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ. ನೀವು ಅಲ್ಲಿಯೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ಇದೇ ನಾನು ನಿಮಗೆ ತಿಳಿಸಬೇಕಾದ ಸಂಗತಿ,” ಎಂದನು.