Matthew 28:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವರ ಮುಂದೆ ಪ್ರತ್ಯಕ್ಷನಾಗಿ, “ನಿಮಗೆ ಶುಭವಾಗಲಿ” ಎಂದನು. ಆ ಸ್ತ್ರೀಯರು ಯೇಸುವಿನ ಬಳಿಗೆ ಹೋಗಿ, ಆತನ ಪಾದಗಳನ್ನು ಹಿಡಿದುಕೊಂಡು ಆತನನ್ನು ಆರಾಧಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.
Kannada BSI Bible 2016
ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಅವರ ಎದುರಿಗೆ ಬಂದು - ನಿಮಗೆ ಶುಭವಾಗಲಿ ಅಂದನು. ಅವರು ಹತ್ತರಕ್ಕೆ ಬಂದು ಆತನ ಪಾದಗಳನ್ನು ಹಿಡಿದು ಆತನಿಗೆ ನಮಸ್ಕಾರಮಾಡಿದರು.
Kannada Bible (KNCL) BSI 2016
ತಟ್ಟನೆ, ಯೇಸುವೇ ಅವರನ್ನು ಎದುರುಗೊಂಡು, “ನಿಮಗೆ ಶುಭವಾಗಲಿ!” ಎಂದರು. ಆ ಮಹಿಳೆಯರು ಹತ್ತಿರಕ್ಕೆ ಬಂದು, ಅವರ ಪಾದಕ್ಕೆರಗಿ ಪೂಜಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಶಿಷ್ಯರಿಗೆ ತಿಳಿಸುವುದಕ್ಕೆ ಹೋಗುತ್ತಿದ್ದಾಗ, ಯೇಸು ಅವರನ್ನು ಸಂಧಿಸಿ, “ಶುಭವಾಗಲಿ” ಎಂದರು. ಅವರು ಬಂದು ಯೇಸುವಿನ ಪಾದಗಳನ್ನು ಹಿಡಿದು ಅವರನ್ನು ಆರಾಧಿಸಿದರು.