Matthew 3:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.
Kannada BSI Bible 2016
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು ಎಂದು ಹೇಳಿದನು.
Kannada Bible (KNCL) BSI 2016
ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.