Matthew 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೋಹಾನನು, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿದೆ. ಹೀಗಿರಲು ನನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ನೀನು ಬರುವುದೇಕೆ?” ಎಂದು ಹೇಳಿ ಆತನನ್ನು ತಡೆಯಲೆತ್ನಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,
Kannada BSI Bible 2016
ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೋಹಾನನು - ನಾನು ನಿನ್ನಿಂದ ಸ್ನಾನ ಮಾಡಿಸಿಕೊಳ್ಳತಕ್ಕವನಾಗಿರುವಲ್ಲಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿ ಆತನನ್ನು ತಡೆಯುತ್ತಾ ಇದ್ದನು.
Kannada Bible (KNCL) BSI 2016
“ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ ನೀವು ನನ್ನ ಬಳಿಗೆ ಬರುವುದೇ?’ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು.