Matthew 3:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.
Kannada BSI Bible 2016
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೇಸು ಅವನಿಗೆ - ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ಧರ್ಮವನ್ನು ನೆರವೇರಿಸತಕ್ಕದ್ದಾಗಿದೆ ಎಂದು ಹೇಳಿದಾಗ ಅವನು ಒಪ್ಪಿಕೊಂಡನು.
Kannada Bible (KNCL) BSI 2016
ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.