Matthew 3:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದನು. ಕೂಡಲೇ ಆಕಾಶವು ತೆರೆಯಿತು. ದೇವರಾತ್ಮನು ಪಾರಿವಾಳದ ರೂಪದಲ್ಲಿ ಕೆಳಗಿಳಿದು ತನ್ನ ಮೇಲೆ ಬರುತ್ತಿರುವುದನ್ನು ಯೇಸು ಕಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.
Kannada BSI Bible 2016
ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು.
Kannada Bible (KNCL) BSI 2016
ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು. ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದುಬಂದು ನೆಲಸುವುದನ್ನು ಕಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.