Matthew 3:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನನ ಉಡುಪುಗಳು ಒಂಟೆಯ ಕೂದಲಿನಿಂದ ಮಾಡಲ್ಪಟ್ಟಿದ್ದವು. ಅವನಿಗೆ ಸೊಂಟದಲ್ಲಿ ತೊಗಲಿನ ನಡುಪಟ್ಟಿ ಇತ್ತು. ಅವನು ಮಿಡತೆ ಮತ್ತು ಕಾಡುಜೇನನ್ನು ಆಹಾರವಾಗಿ ತಿನ್ನುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
Kannada BSI Bible 2016
ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಯೋಹಾನನಿಗೆ ಒಂಟೇ ಕೂದಲಿನ ಹೊದಿಕೆಯೂ ಸೊಂಟದಲ್ಲಿ ತೊಗಲಿನ ನಡುಕಟ್ಟೂ ಇದ್ದವು. ಅವನಿಗೆ ವಿುಡಿತೆ ಮತ್ತು ಕಾಡಜೇನು ಆಹಾರವಾಗಿದ್ದವು.
Kannada Bible (KNCL) BSI 2016
ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.