Matthew 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡ ಮೇಲೆ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
Kannada BSI Bible 2016
ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಬಳಿಗೆ ಹೊರಟುಹೋಗಿ, ಅವರು ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
Kannada Bible (KNCL) BSI 2016
ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಈತನಿಂದ ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.