Matthew 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?
Kannada BSI Bible 2016
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?
Kannada Bible (KNCL) BSI 2016
ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?