Matthew 3:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಅಬ್ರಹಾಮನು ನಮ್ಮ ತಂದೆ’ ಎಂದು ನೀವು ಜಂಬಪಡುವುದೇಕೆ? ದೇವರು ಅಬ್ರಹಾಮನಿಗಾಗಿ ಇಲ್ಲಿರುವ ಬಂಡೆಗಳಿಂದಲೂ ಮಕ್ಕಳನ್ನು ಸೃಷ್ಟಿಸಬಲ್ಲನು ಎಂದು ನಾನು ನಿಮಗೆ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.
Kannada BSI Bible 2016
ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.