Matthew 4:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಕತ್ತಲಲ್ಲಿ ಜೀವಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
Kannada BSI Bible 2016
ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತಲಲ್ಲಿ ವಾಸಿಸಿದ ಈ ಸೀಮೆಗಳ ಜನರಿಗೆ ದೊಡ್ಡ ಬೆಳಕು ಕಾಣಿಸಿತು; ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಸೂರ್ಯೋದಯವಾಯಿತು ಎಂಬದು.
Kannada Bible (KNCL) BSI 2016
ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”