Matthew 4:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂದಿನಿಂದ ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದನು. “ಪರಲೋಕರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
Kannada BSI Bible 2016
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದಿನಿಂದ ಯೇಸು - ಪರಲೋಕರಾಜ್ಯವು ಸಮೀಪಿಸಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
Kannada Bible (KNCL) BSI 2016
ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.