Matthew 4:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಲಿಲಾಯ ಸರೋವರದ ತೀರದಲ್ಲಿ ಯೇಸು ತಿರುಗಾಡುತ್ತಾ ಇದ್ದನು. ಆತನು ಸೀಮೋನ (ಈತನನ್ನೇ ಪೇತ್ರ ಎಂದು ಕರೆಯಲಾಯಿತು.) ಮತ್ತು ಸೀಮೋನನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರನ್ನು ಕಂಡನು. ಬೆಸ್ತರಾಗಿದ್ದ ಇವರಿಬ್ಬರು ಅಂದು ಸರೋವರದ ತೀರದಲ್ಲಿ ಬಲೆ ಹಾಕಿ ಮೀನು ಹಿಡಿಯುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
Kannada BSI Bible 2016
ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ, ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಅಣ್ಣತಮ್ಮಂದಿರಿಬ್ಬರು ಬಲೆಬೀಸುವದನ್ನು ಕಂಡನು; ಅವರು ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ತಮ್ಮನಾದ ಅಂದ್ರೆಯ. ಅವರು ಬೆಸ್ತರು, ಸಮುದ್ರದಲ್ಲಿ ಬಲೆಬೀಸುತ್ತಿದ್ದರು.
Kannada Bible (KNCL) BSI 2016
ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಪೇತ್ರ ಎನಿಸಿಕೊಂಡ ಸೀಮೋನನನ್ನೂ ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.